ಮಂಡ್ಯ:-
ಕೆ.ಆರ್.ಪೇಟೆಯ ಉಪಚುನಾವಣೆಯಲ್ಲಿ ನನ್ನ ಗೆಲುವಿಗೆ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಮತ್ತು ಚುನಾವಣಾ ಸಾರಥ್ಯ ವಹಿಸಿದ್ದ ಬಿ.ವೈ.ವಿಜಯೇಂದ್ರ ಶ್ರಮ ಅಪಾರ ಎಂದು ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.
ಕೆ.ಆರ್.ಪೇಟೆ ತಾಲೂಕಿನ ಮಾಚಹಳ್ಳಿ ಗ್ರಾಮದಲ್ಲಿ ಡಾ.ಶಿವಕುಮಾರ ಸ್ವಾಮೀಜಿಯವರ ಪುತ್ಥಳಿ ಉದ್ಘಾಟನಾ ಸಮಾರಂಭದ ಭಾಷಣದುದ್ದಕ್ಕೂ ಯಡಿಯೂರಪ್ಪ ಮತ್ತು ಅವರ ಮಕ್ಕಳನ್ನು ಕೊಂಡಾಡಿದರು.
ವಿಜಯೇಂದ್ರ ತಂದೆಗೆ ತಕ್ಕ ಮಗನಾಗಿದ್ದಾರೆ ಮತ್ತು ಇಡೀ ಕರ್ನಾಟಕದಲ್ಲಿ ಯುವಕರಿಗೆ ಮತ್ತು ಬಿಜೆಪಿಗೆ ಶಕ್ತಿ ತುಂಬುತ್ತಿದ್ದಾರೆ.
ನಾನು ಜೆಡಿಎಸ್ ಪಕ್ಷದಲ್ಲಿದ್ದೆ, ಯಡಿಯೂರಪ್ಪ ಮುಖ್ಯಮಂತ್ರಿ ಯಾಗುತ್ತಾರೆ ಎಂದು ಅವರ ಜೊತೆ ಸೇರಿದೆ. ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಲು ಎರಡು ತಿಂಗಳ ಕಾಲ ವಿಜಯೇಂದ್ರ ಶ್ರಮಿಸಿದ್ದಾರೆ ಎಂದರು. ಜೆಡಿಎಸ್ ನಲ್ಲಿದ್ದ ವೇಳೆ ಎರಡು ಚುನಾವಣೆ ಎದುರಿಸಿದ್ದೆ. ಅದರಲ್ಲಿ 7 ಕೆಜಿ ಕರಗಿದ್ದೆ. ಬಿಜೆಪಿಯಿಂದ ಚುನಾವಣೆ ಎದುರಿಸಿದಾಗ 2 ಕೆಜಿ ಕೂಡ ಕರಗಲಿಲ್ಲ. ನನ್ನ ಚುನಾವಣೆಯ ಸಂಪೂರ್ಣ ಜವಾಬ್ದಾರಿಯನ್ನು ವಿಜೇಂದ್ರ ಅವರೇ ವಹಿಸಿದ್ದರು. ವಿಜಯೇಂದ್ರ, ರಾಘವೇಂದ್ರ ಇಬ್ಬರು ತಂದೆಗೆ ತಕ್ಕ ಮಕ್ಕಳು. ಬಿ.ವೈ.ರಾಘವೇಂದ್ರ ಕೂಡ ತಂದೆಯಂತೆ ಶಿವಮೊಗ್ಗ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದರು.
ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ