ಮಾಹಿತಿ ಕಣಜ:- (ಆರೋಗ್ಯ ಸುದ್ದಿ)
ನಮ್ಮ ದೇಹದಲ್ಲಿ ಸಕ್ಕರೆ ಮಟ್ಟ ಹೆಚ್ಚಾದಾಗ ಮಧುಮೇಹ ಸಮಸ್ಯೆ ಕಾಡುತ್ತಿರುತ್ತದೆ. ಸಕ್ಕರೆ ಕಾಯಿಲೆ ಒಮ್ಮೆ ಬಂದರೆ ವಾಸಿಯಾಗುವುದಿಲ್ಲ. ಹಾಗಾಗಿ ದೇಹದಲ್ಲಿ ಸಕ್ಕರೆ ಮಟ್ಟ ಹೆಚ್ಚಾದಾಗ ಅದನ್ನು ತಕ್ಷಣ ನಿಯಂತ್ರಿಸಲು ಈ ವಸ್ತುಗಳನ್ನು ಸೇವಿಸಿದರೆ ತುಂಬಾ ಉಪಯುಕ್ತವಾಗುತ್ತದೆ.
ಬೆಳ್ಳುಳ್ಳಿ:
ಬೆಳ್ಳುಳ್ಳಿಯು ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ತುಂಬಾ ಸಹಾಯ ಮಾಡುತ್ತದೆ. ಬೆಳ್ಳುಳ್ಳಿಯಲ್ಲಿ ಅಲಿಸಿನ್ ಅಂಶವಿದ್ದು ಇದು ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ.
ಅರಿಶಿನ:
ಅರಿಶಿನವನ್ನು ಸೇವಿಸುವುದರಿಂದ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ತುಂಬಾ ಸಹಾಯ ಮಾಡುತ್ತದೆ. ಅರಿಶಿನದಲ್ಲಿ ಕರ್ಕ್ಯೂ ಮಿನ್ ಅಂಶವಿದ್ದು ಇದು ಇನ್ಸುಲಿನ್ ಮಟ್ಟವನ್ನು ಹೆಚ್ಚಿಸುತ್ತದೆ. ಇದರಿಂದಾಗಿ ಸಕ್ಕರೆಯ ಅಂಶ ನಿಯಂತ್ರಣಕ್ಕೆ ಬರುತ್ತದೆ.
ಲವಂಗ:
ಲವಂಗವು ಸಕ್ಕರೆ ಅಂಶವನ್ನು ನಿಯಂತ್ರಿಸುತ್ತದೆ. ಇದು ಇನ್ಸುಲಿನ್ ಮಟ್ಟವನ್ನು ಹೆಚ್ಚಿಸುತ್ತದೆ. ಇದರಿಂದಾಗಿ ಸಕ್ಕರೆ ಕಾಯಿಲೆಯ ಅಪಾಯ ಕಡಿಮೆಯಾಗುತ್ತದೆ.
😊 ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ 😊
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ